(ನ್ಯೂಸ್ ಕಡಬ) newskadaba.com ಅರಂತೋಡು, ಜು. 09. ನಾಲ್ಕು ದಿನಗಳ ಹಿಂದೆ ಕಾಲುಸಂಕ ದಾಟುತ್ತಿದ್ದ ಸಂದರ್ಭ ಆಯ ತಪ್ಪಿ ಹೊಳೆಗೆ ಬಿದ್ದಿದ್ದ ಕೂಲಿ ಕಾರ್ಮಿಕನ ಮೃತದೇಹವು ಇಂದು ಪತ್ತೆಯಾಗಿದೆ.

ಕುಂದಲ್ಪಾಡಿ ಪೆರಾಜೆ ಎಂಬಲ್ಲಿ ರಬ್ಬರ್ ಟ್ಯಾಪರ್ ಆಗಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ಸಮೀಪದ ನಾರಾಯಣನ್ ಎಂಬವರು ಕೂರ್ನಡ್ಕದಲ್ಲಿ ನಾಲ್ಕು ದಿನಗಳ ಹಿಂದೆ ನೀರು ಪಾಲಾಗಿದ್ದು, ಅಂದಿನಿಂದಲೇ ಶೋಧ ಕಾರ್ಯ ಆರಂಭಗೊಂಡಿತ್ತು. ಸುಳ್ಯ ಅಗ್ನಿಶಾಮಕ ದಳ, ಎಸ್.ಡಿ.ಆರ್.ಎಫ್ ತಂಡ, ಪೋಲಿಸ್ ಇಲಾಖೆಯೊಂದಿಗೆ ಅರಂತೋಡು ಕಲ್ಲುಗುಂಡಿ ವಿಖಾಯ ತಂಡ ಹಾಗೂ ಪೈಚಾರಿನ ಮುಳುಗು ತಜ್ಞರು ಕೂಡಾ ಶೋಧ ಕಾರ್ಯದಲ್ಲಿ ತೊಡಗಿದ್ದರು. ಇದೀಗ ಆಲೆಟ್ಟಿಯ ಕನ್ನಿಗುಂಡಿ ಬಳಿಯಲ್ಲಿ ಪಯಸ್ವಿನಿ ಹೊಳೆ ಮಧ್ಯೆ ಪೊದೆಯಲ್ಲಿ ಸಿಲುಕಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
