(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ತನ್ನ ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನನ್ನು ಮಾಲಕನೇ ಬೆಂಕಿ ಕೊಟ್ಟು ಕ್ರೂರವಾಗಿ ಕೊಂದಿರುವ ಘಟನೆ ಬುದ್ಧಿವಂತರ ಜಿಲ್ಲೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯಲ್ಲಿ ಕೆಲಸಕ್ಕಿದ್ದ ಜಗ್ಗು (35) ಎಂಬವರೇ ಮೃತ ದುರ್ದೈವಿ. ಶನಿವಾರದಂದು ಕ್ಷುಲ್ಲಕ ಕಾರಣಕ್ಕೆ ಅಂಗಡಿ ಮಾಲಕ ತೌಸೀಫ್ ಹುಸೈನ್ ಎಂಬಾತ ಜಗ್ಗುವನ್ನು ಕೊಲೆ ಮಾಡುವ ಉದ್ದೇಶದಿಂದ ಬೆಂಕಿಕೊಟ್ಟಿದ್ದು, ಸುಟ್ಟ ದೇಹದೊಂದಿಗೆ ಚೀರಾಡುತ್ತಿದ್ದ ಸಂದರ್ಭದಲ್ಲಿ ಸ್ಥಳೀಯರು ಜಮಾಯಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ವಿದ್ಯುತ್ ಶಾಕ್ ತಗುಲಿ ದೇಹ ಸುಟ್ಟಿರುವುದಾಗಿ ಸ್ಥಳೀಯರಲ್ಲಿ ತಿಳಿಸಿದ್ದು, ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡ ಪಾಂಡೇಶ್ವರ ಪೊಲೀಸರು ತನಿಖೆ ನಡೆಸಿದಾಗ ಮಾಲಕನೇ ಸುಟ್ಟು ಕೊಲೆ ಮಾಡಿರುವುದಾಗಿ ತಿಳಿದುಬಂದ ಹಿನ್ನೆಲೆಯಲ್ಲಿ ಆರೋಪಿ ತೌಸೀಫ್ ಹುಸೈನ್ ನನ್ನು ಬಂಧಿಸಿದ್ದಾರೆ.

