(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು.09. ಪಿಕಪ್ ವಾಹನ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರೆ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿಯನ್ನು ಉರುವಾಲು ಪದವು ಶುಂಠಿಪಲ್ಕೆ ನಿವಾಸಿ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

