ಕಡಬ: ಹೊಳೆನೀರಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು. 10. ಹೊಳೆನೀರಿಗೆ ಬಿದ್ದು ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ಸಮೀಪದ ಇಚ್ಲಂಪಾಡಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಇಚ್ಲಂಪಾಡಿ ಗ್ರಾಮದ ಕುಡಾಲ ನಿವಾಸಿ ಕೃಷ್ಣಪ್ಪ ಗೌಡ(ಕಿಟ್ಟಣ್ಣ) ಎಂದು ಗುರುತಿಸಲಾಗಿದೆ. ಇವರು ಜು. 09ರಂದು ಮಧ್ಯಾಹ್ನ ಇಚ್ಲಂಪಾಡಿಯ ಹೊಳೆಬದಿಗೆ ಹೋದವರು ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮನೆಯವರು ಹೊಳೆಯಲ್ಲಿ ಹುಡುಕಾಟ ನಡೆಸಿದಾಗ ಅವರ ಚಪ್ಪಲಿ ಪತ್ತೆಯಾಗಿತ್ತು. ಈ ಹಿನ್ನೆಲೆ ರಾತ್ರಿ ತನಕ ಹೊಳೆ ಬದಿ ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರೆತಿರಲಿಲ್ಲ. ಇದೀಗ ಜು.10ರಂದು ಬೆಳಿಗ್ಗೆ ಹೊಳೆಬದಿ ಮತ್ತೆ ಹುಡುಕಾಟ ನಡೆಸಿದಾಗ ಗುಂಡ್ಯಹೊಳೆ ಸೇರುವಲ್ಲಿ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

Scroll to Top