ನಕಲಿ ಅಂಕಪಟ್ಟಿ ತಯಾರಿ ಜಾಲ ಪತ್ತೆ ► ಹಲವು ಸೊತ್ತುಗಳ ಸಹಿತ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.26. ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಭಾರೀ ವಂಚನೆ ನಡೆಸುತ್ತಿದ್ದ ಇಬ್ಬರನ್ನು ಮಹತ್ವದ ಕಾರ್ಯಾಚರಣೆ ನಡೆಸಿ ಹಲವು ಸೊತ್ತುಗಳ ಸಮೇತ ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ.

ಬಂಧಿತ ಆರೋಪಿಗಳನ್ನು ಶ್ರೀನಿವಾಸ್‌ ರೆಡ್ಡಿ ಮತ್ತು ಸುನೀಲ್‌ ಕುಮಾರ್‌ ಎಂದು ಗುರುತಿಸಲಾಗಿದ್ದು, ಇವರು ಹಲವು ವಂಚಕರಿಗೆ ನಕಲಿ ಅಂಕಪಟ್ಟಿ ತಯಾರಿಸಿ ನೀಡಿ ಹಣ ಮಾಡಿರುವುದು ಬೆಳಕಿಗೆ ಬಂದಿದೆ. ಕಾರ್ಯಾಚರಣೆ ವೇಳೆ ಕಂಪ್ಯೂಟರ್‌, ಜೆರಾಕ್ಸ್‌ ಯಂತ್ರ, ಪ್ರಿಂಟಿಂಗ್‌ ಯತ್ರ ಮತ್ತು ಅಂಕಪಟ್ಟಿಗಳಿಗೆ ಬಳಸಲಾಗುತ್ತಿದ್ದ ಅಪಾರ ಪ್ರಮಾಣದ ಪೇಪರ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರಿಬ್ಬರು ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಮತ್ತು ಪಿಎಚ್‌ಡಿ ನಕಲಿ ಸರ್ಟಿಫಿಕೇಟ್‌ಗಳನ್ನು ತಯಾರಿಸಿಕೊಡುತ್ತಿದ್ದರು ಎಂದು ತಿಳಿದು ಬಂದಿದೆ.

Also Read  ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು

error: Content is protected !!
Scroll to Top