ಸುಳ್ಯ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ➤ ಯುವಕ ಅರೆಸ್ಟ್, ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 10. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೋಕ್ಸೋ ಪ್ರಕರಣವನ್ನು ದಾಖಲಿಸಿ, ಆತನನ್ನು ಬಂಧಿಸಲಾಗಿದೆ.

ಬಂಧಿತನನ್ನು ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಎಂದು ಗುರುತಿಸಲಾಗಿದೆ. ಈತ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದು, ವಿಷಯ ತಿಳಿದ ಬಳಿಕ ಬಾಲಕಿಯ ತಾಯಿಯು ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜು. 7ರಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್‌ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Also Read  ಬೆಳ್ಳಾರೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

error: Content is protected !!
Scroll to Top