ಜೈನಮುನಿಗಳ ಹತ್ಯೆ ಆರೋಪಿಗಳ ವಿರುದ್ದ ಸೂಕ್ತ ಕ್ರಮ ➤ ಗೃಹಸಚಿವ ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜು. 10. ಜೈನಮುನಿ ನಂದಿ ಮಹಾರಾಜರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯಾರೂ ರಾಜಕೀಯ ಮಾಡಲ್ಲ. ಕೊಲೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಅಪರಾಧಿಗಳ ವಿರುದ್ದ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಇದೆ. ಇದರಲ್ಲಿ ತಾರತಮ್ಯದ ಪ್ರಶ್ನೆಯೇ ಇಲ್ಲ. ವರೂರಲ್ಲಿ ಜೈನ ಮುನಿಗಳು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು, ಅವರ ಬೇಡಿಕೆ ಕೇಳುತ್ತೇನೆ. ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ತೀವೆ ಎಂದರು.

Also Read  ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !!

error: Content is protected !!
Scroll to Top