ಕಾಡಾನೆ ದಾಳಿ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜು. 10.  ಪೊರಕೆ ಕಡ್ಡಿ ಸಂಗ್ರಹಕ್ಕೆಂದು ತೆರಳಿದ್ದ ತಂದೆ- ಮಗನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ತಂದೆ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಮೃತರನ್ನು ಪ್ರಭುಲಿಂಗ ಸ್ವಾಮಿ ಎಂದು ಗುರುತಿಸಲಾಗಿದೆ. ಇವರು ಮಗ ಚಂದ್ರು ಜೊತೆ ಮಲೆಮಹದೇಶ್ವರ ವನ್ಯಜೀವಿ ವಲಯದ ಆಲದ ಕೆರೆ ಅರಣ್ಯ ಪ್ರದೇಶಕ್ಕೆ ಪೊರಕೆ ಕಡ್ಡಿ ಸಂಗ್ರಹಕ್ಕೆಂದು ಹೋಗಿದ್ದ ವೇಳೆ ಇವರಿಬ್ಬರ ಮೇಲೆ ಆನೆ ದಾಳಿ ಮಾಡಿದೆ. ಘಟನೆಯಿಂದ ತಂದೆ ಮೃತಪಟ್ಟಿದ್ದು, ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಮುಖ್ಯಮಂತ್ರಿ ಯಡಿಯೂರಪ್ಪರ ಭಾಷಣ ಆರಂಭ ► ವಿಶ್ವಾಸಮತ ಗಳಿಸ್ತಾರಾ ಯಡಿಯೂರಪ್ಪ..?

error: Content is protected !!
Scroll to Top