ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

(ನ್ಯೂಸ್ ಕಡಬ) newskadaba.com ಬೆಳ್ಮಣ್, ಜು. 10.ಚಾಲಕನ ನಿಯಂತ್ರಣ ತಪ್ಪಿದ ಕಾರೊಂರು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ಮಣ್ ಸಮೀಪದ ಕೆದಿಂಜೆ ಪಕಳ ಚರ್ಚ್ ಬಳಿ ಭಾನುವಾರದಂದು ತಡರಾತ್ರಿ ನಡೆದಿದೆ.

ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

Scroll to Top