ಆನ್‍ಲೈನ್ ಬೆಟ್ಟಿಂಗ್ ದಂಧೆಗೆ ಬಿದ್ದು ಸ್ವಂತ ಮನೆಯಿಂದಲೇ ಚಿನ್ನ ಕದ್ದ ಯುವಕ – ಪೊಲೀಸರ ತನಿಖೆ ವೇಳೆ ಮನೆಯವರಿಗೆ ಕಾದಿತ್ತು ಶಾಕ್

crime, arrest, suspected

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.11. ಆನ್‍ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದ ಯುವಕನೋರ್ವ ಸ್ವಂತ ಅಣ್ಣನ ಮನೆಯಿಂದಲೇ ಸುಮಾರು 11 ಪವನ್ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಿಂದ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಬೆಂಗಳೂರು ದಕ್ಷಿಣ ವಿಭಾಗದ ಸಿದ್ಧಾಪುರ ಠಾಣಾ ವ್ಯಾಪ್ತಿಯ ಸೋಮೇಶ್ವರ ನಗರ ನಿವಾಸಿ ಮೊಹಮ್ಮದ್ ಪರ್ವೀನ್ ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿದ್ದ ಆರೋಪಿ ಪರ್ವೀನ್, ಮೆಡಿಕಲ್ ಸ್ಟೋರ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಆನ್‌ಲೈನ್ ಬೆಟ್ಟಿಂಗ್ ದಂಧೆಯ ದಾಸನಾಗಿದ್ದ. ಬೆಟ್ಟಿಂಗ್‍ನಲ್ಲಿ ಹಣ ಹೂಡಿ ಅಪಾರ ಹಣವನ್ನು ಕಳೆದುಕೊಂಡಿದ್ದ ಈತ ಹೆಚ್ಚು ಹಣ ಗಳಿಸಬೇಕೆಂಬ ದುರಾಸೆಯಿಂದ ಮನೆಯಲ್ಲಿದ್ದ ಚಿನ್ನಾಭರಣವನ್ನೇ ಕದ್ದು ಸಿಕ್ಕಿಬಿದ್ದಿದ್ದಾನೆ. ಆರೋಪಿಯ ಬಳಿಯಿಂದ ಸುಮಾರು 9 ಪವನ್ ಚಿನ್ನವನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ‌‌.

Also Read  ಒಮಿಕ್ರಾನ್ ಆತಂಕ- ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ➤ ಸಿಎಂ ಬೊಮ್ಮಾಯಿ

error: Content is protected !!
Scroll to Top