ಕಾಪು ಬೀಚ್ ನ ಲೈಟ್ ಹೌಸ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

(ನ್ಯೂಸ್ ಕಡಬ) newsadaba.com ಕಾಪುಜು. 11. ಸಮುದ್ರ ತೀರದಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಕಡಲು ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದ್ದು, ಇದರಿಂದಾಗಿ ಲೈಟ್‌ ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟವಾಗಿದೆ. ಹೀಗಿದ್ದರೂ ಕೆಲವು ಪ್ರವಾಸಿಗರು ಪ್ರಯಾಸದಿಂದ ಮೆಟ್ಟಿಲುಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು ಯತ್ನಿಸುತ್ತಿರುವುದರಿಂದ ಆ ಪ್ರದೇಶಕ್ಕೆ ಹೋಗುವುದನ್ನೇ ನಿರ್ಬಂಧಿಸಿ ಹಗ್ಗ ಕಟ್ಟಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಲೈಟ್ ಹೌಸ್‌ ಗೆ ಬೀಗ ಜಡಿಯಲಾಗಿದ್ದು, ಪ್ರವಾಸಿಗರಿಗೆ ಅವಕಾಶ ನಿರಾಕರಿಸಲಾಗಿದೆ.

Also Read  ಸುಳ್ಯ: ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ► ಆರನೇ ಬಾರಿ ವಿಜಯದ ಪತಾಕೆ ಹಾರಿಸಿದ ಎಸ್.ಅಂಗಾರ

error: Content is protected !!
Scroll to Top