ಮಂಗಳೂರು: ಏರ್ ಇಂಡಿಯಾ ವಿಮಾನ ವಿಳಂಬ- ಪ್ರಯಾಣಿಕರ ಪರದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 11. ಸೋಮವಾರ ತಡರಾತ್ರಿ 11 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ದುಬೈ ಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಬೆಳಗ್ಗೆಯಾದರೂ ಇನ್ನೂ ಹೊರಡದೆ ಪ್ರಯಾಣಿಕರು ಪರದಾಡುತ್ತಿರುವ ಬಗ್ಗೆ ವರದಿಯಾಗಿದೆ.

ಇಂಜಿನ್ ಹಾಳಾಗಿದೆಯೆಂದು ಉತ್ತರಿಸುತ್ತಿರುವ ಅಧಿಕಾರಿಗಳು ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಕಲ್ಪಿಸದೇ ಇಡೀ ರಾತ್ರಿ ವಿಮಾನ ನಿಲ್ದಾಣದಲ್ಲೇ ಉಳಿಯುವಂತೆ ಮಾಡಿರುವುದು ಸರಿಯಲ್ಲ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸಂಬಂಧಪಟ್ಟ ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಬೇಕಾಗಿದೆ ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ ಎನ್ನಲಾಗಿದೆ.

Also Read  ಉಡುಪಿ: ತೈಲ ಸೋರಿಕೆಯಿಂದ ವಾಹನಗಳು ಸ್ಕಿಡ್

error: Content is protected !!
Scroll to Top