ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ- ಬಿಜೆಪಿ ಕಾರ್ಪೊರೇಟರ್ ಸಹೋದರನ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ಜು. 11. ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ರವಿವಾರ ನಡೆದಿದ್ದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ಶಂಕರ
ಅಲಿಯಾಸ್ ತುಪ್ಪ ಎಂಬಾತನನ್ನು ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಹನುಮಜಯಂತಿ ಆಚರಣೆ ವೇಳೆ ನಾಯಕ ನಟ ದಿವಂಗತ ಪುನೀತ್ ರಾಜ್ ಕುಮಾರ್ ರವರ ಭಾವಚಿತ್ರ ಹಾಕುವ ವಿಚಾರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು, ಈ ಹಿನ್ನೆಲೆ ರಾಜಿ ಮಾಡಿಕೊಳ್ಳಲು ವೇಣುಗೋಪಾಲನನ್ನು ರವಿವಾರದಂದು ರಾತ್ರಿ ಅಗ್ನಿಶಾಮಕ ಕಚೇರಿ ಬಳಿಗೆ ಕರೆಸಿಕೊಂಡು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ದೂರು ದಾಖಲಾಗಿದ್ದು, ಸೋಮವಾರ ಸಂದೇಶ್ ಮತ್ತು ಮಣಿಕಂಠ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನುಳಿದ ನಾಲ್ವರು ಆರೋಪಿಗಳಾದ ಶಂಕರ ಅಲಿಯಾಸ್ ತುಪ್ಪ, ಅನಿಲ್, ಹ್ಯಾರಿಸ್ ಮತ್ತು ಮಂಜ ಎಂಬವರನ್ನು ಬಂಧಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Also Read  ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ

error: Content is protected !!
Scroll to Top