ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿಯಿಂದ ದ್ವೇಷ ರಾಜಕಾರಣ ಆರೋಪ – ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.12. ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶ ಪೂರಿತವಾಗಿ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿಯು ದ್ವೇಷ ರಾಜಕಾರಣವನ್ನು ನಡೆಸುತ್ತಿದೆ ಎಂದು ಆರೋಪಿಸಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಡಬ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಮೌನ ಪ್ರತಿಭಟನೆ ಆರಂಭಗೊಂಡಿದೆ.

ರಾಜಕೀಯ ದ್ವೇಷದಿಂದಾಗಿ ರಾಹುಲ್ ಗಾಂಧಿಯವರ ವಿರುದ್ಧ ಮೊಕದ್ದಮೆ ಹೂಡಲಾಗಿದ್ದಲ್ಲದೆ, ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಶೀಘ್ರದಲ್ಲೇ ರಾಹುಲ್ ಗಾಂಧಿಯವರ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಿ ಪುನಃ ಸಂಸದರಾಗಿ ಮುಂದುವರಿಯಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಬೆಳಿಗ್ಗೆಯಿಂದ ಸಂಜೆಯವರೆಗೆ ಮೌನ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ಹಲವು ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದಾರೆ.

Also Read  ಉಪಚುನಾವಣೆ ಕಾಂಗ್ರೆಸ್ ಸಮರ್ಥವಾಗಿ ಎದುರಿಸಲಿದೆ - ಸಿಎಂ

error: Content is protected !!
Scroll to Top