ರಾಷ್ಟ್ರೀಯ ಲೋಕ್ ಅದಾಲತ್ 19,666 ಪ್ರಕರಣಗಳು ಇತ್ಯರ್ಥ- 22,19,35,765 ಕೋಟಿ ರೂ.ಪರಿಹಾರ ವಸೂಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 12. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಶನಿವಾರದಂದು ಹಮ್ಮಿಕೊಳ್ಳಲಾಗಿತ್ತು.

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 50 ಬೈಠಕ್‍ಗಳು ನಡೆದವು. ಅದಾಲತ್‍ನಲ್ಲಿ ಒಟ್ಟು 24,303 ಪ್ರಕರಣಗಳು ಪರಿಗಣಿಸಲಾಗಿತ್ತು. ಅದರಲ್ಲಿ 19,666 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 22,19,35,765 ಕೋಟಿ ರೂ.ಗಳ ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ಅವರು ತಿಳಿಸಿದರು.
ಈ ರಾಷ್ಟ್ರೀಯ ಲೋಕ್ ಅದಾಲತ್ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು. ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಭಾಗವಹಿಸಿದ್ದರು.

Also Read  ಆಕಿಫ್ ಎಂಬ ಬಾಲಕನ ಕೊಲೆ ಕೃತ್ಯ ಖಂಡಿಸಿ ಜಸ್ಟೀಸ್ ಫಾರ್ ಆಕಿಫ್ ನಾಗರಿಕ ಸಮಿತಿ ಕೆ.ಸಿ.ರೋಡ್ ವತಿಯಿಂದ ಪ್ರತಿಭಟನೆ

error: Content is protected !!
Scroll to Top