ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ನಿಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 12. ಅನಾರೋಗ್ಯದಿಂದಾಗಿ ಉಪ್ಪಿನಂಗಡಿ ಠಾಣಾ ಹೆಡ್ ಕಾನ್ಸ್ಟೇಬಲ್ ಕೃಷ್ಣಪ್ಪ ನಾಯ್ಕ್ ಜೆ ರವರು ಬುಧವಾರದಂದು ನಿಧನರಾದರು.

 

ಮೂಲತಃ ಮಾಣಿ ಸಮೀಪದ ನೇರಳಕಟ್ಟೆ ನಿವಾಸಿಯಾಗಿರುವ ಕೃಷ್ಣಪ್ಪ ರವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸುಮಾರು 6 ವರ್ಷಗಳಿಂದ ಕರ್ತವ್ಯ ನಿರ್ವಹಿಸಿಕೊಂಡಿದ್ದರು. ಅನಾರೋಗ್ಯದಿಂದಾಗಿ ಕಳೆದ ಒಂದು ವರ್ಷದಿಂದ ರಜೆಯಲ್ಲಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಸುಮಾರು 26 ವರುಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದ ಕೃಷ್ಣಪ್ಪ ರವರು, ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Also Read  ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

error: Content is protected !!
Scroll to Top