ಮಾದಕ ವಸ್ತು ಮಾರಾಟಕ್ಕೆ ಯತ್ನ- ಇಬ್ಬರ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ ಘಟನೆ ಮೂಡುಶೆಡ್ಡೆ ಎಂಬಲ್ಲಿ ವರದಿಯಾಗಿದೆ.

ಬಂಧಿತರನ್ನು ಪಿಲಿಕುಳ ಸಮೀಪದ ನಿವಾಸಿ ಶಾರೂಕ್ ಮತ್ತು ತೋಕೂರಿನ ಜಗದೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 4.5 ಗ್ರಾಂ ಎಂಡಿಎಂಎ, ಮೂರು ಮಾರಕಾಯುಧಗಳು, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 4,41,700 ರೂ. ಎಂದು ಅಂದಾಜಿಸಲಾಗಿದೆ.


ಆರೋಪಿಗಳು ಮೂಡುಶೆಡ್ಡೆಗೆ ಹೋಗುವ ದಾರಿಯಲ್ಲಿ ನಿಂತು ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಕಾವೂರು ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

Also Read  ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಮನವಿಗೆ ಸ್ಪಂದಿಸಿದ ಸರ್ಕಾರ ಮಂಗಳೂರಿನಲ್ಲಿ ಪ್ಲಾಸ್ಮಾ ತೆಗೆಯಲು ಸರಕಾರದಿಂದ ಅನುಮತಿ

error: Content is protected !!