ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪ ಸಾಬೀತು- ಅಪರಾಧಿಗೆ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ 3 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ.


ಶಿಕ್ಷೆಗೊಳಗಾದ ಆರೋಪಿಯನ್ನಿ ಬಂಟ್ವಾಳ ತಾಲೂಕಿನ ಗೋಳ್ತಮಜಲುವಿನ ಸತೀಶ್ ಕುಲಾಲ್ ಎಂದು ಗುರುತಿಸಲಾಗಿದೆ. ಈತ 2019ರ ಆ. 30ರಂದು ಸಂಜೆ ಬಾಲಕಿಯು ವಿಟ್ಲದಿಂದ ಬಸ್‌ನಲ್ಲಿ ತೆರಳಿ ಕೆದುವಾರು ಬಸ್ ತಂಗುದಾಣದ ಬಳಿ ಇಳಿದು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಯು ಹಿಂದಿನಿಂದ ಹಿಡಿದು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿತ್ತು. ಬಾಲಕಿ ಬೊಬ್ಬೆ ಹೊಡೆದಾಗ ವಿಚಾರಿಸಿದ ವ್ಯಕ್ತಿಗೆ ಆರೋಪಿಯು ಬೆದರಿಕೆಯೊಡ್ಡಿ ಹಲ್ಲೆ ನಡೆಸಿದ್ದ ಎಂದೂ ಆರೋಪ ವ್ಯಕ್ತವಾಗಿತ್ತು. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗಿನ ಎಸ್.ಐ ಆಗಿದ್ದ ಯಲ್ಲಪ್ಪ ಎಸ್. ತನಿಖೆ ನಡೆಸಿ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Also Read  ಶರವೂರು: ಶಾಲೆಯಲ್ಲಿ ಪ್ರತಿಭೋತ್ಸವ ಕಾರ್ಯಕ್ರಮ

ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಆರೋಪಿಗೆ ಪೋಕ್ಸೋ ಕಲಂ 8ರಡಿ 3 ವರ್ಷ ಸಜೆ, 10,000 ರೂ.ದಂಡ ವಿಧಿಸಿದ್ದಾರೆ ಎನ್ನಲಾಗಿದೆ. ಒಂದು ವೇಳೆ ದಂಡ ತೆರಲು ತಪ್ಪಿದಲ್ಲಿ 3 ತಿಂಗಳು ಹೆಚ್ಚುವರಿ ಸಜೆ ಅನುಭವಿಸುವಂತೆ ಆದೇಶಿಸಲಾಗಿದೆ. ಐಪಿಸಿ ಕಲಂ 354ರಡಿ 1 ವರ್ಷ ಸಜೆ, 5,000 ರೂ.ದಂಡ ಪಾವತಿಸದಿದ್ದರೆ ಒಂದು ತಿಂಗಳು ಹೆಚ್ಚುವರಿ ಸಜೆ. ಐಪಿಸಿ ಕಲಂ 506ರ ಅಡಿ 1 ವರ್ಷ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೇ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದಿಸಿದ್ದರು.

Also Read  ಇಂದು(ಜ.01) ಕಡಬದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ► ರಾಜ್ಯ ಕಾರ್ಯದರ್ಶಿ ಬಿ.ಎಂ.ಫಾರೂಕ್ ಭೇಟಿ

error: Content is protected !!
Scroll to Top