ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಪ್ರಕರಣ- ಓರ್ವ ಅಂದರ್

crime, arrest, suspected

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 13. ಹಿಂದಿನಿಂದಲೂ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಬಂಧಿತನನ್ನು ಹರೀಶ್ ಪೂಜಾರಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿಯಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.

ಕೊರಗಕಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಅಧ್ಯಕ್ಷ ಪ್ರದೀಪ್ ಕುಮಾರ್ ಹೆಗ್ಡೆ ಎಂಬವರು ನೀಡಿದ ದೂರಿನಲ್ಲಿ ‌ಹರೀಶ್ ಪೂಜಾರಿ, ಡಾ.ರಾಜೇಶ್, ರಮೇಶ್ ಕುಡ್ಮೇರು, ಓಂ ಪ್ರಕಾಶ್ ಮತ್ತು ಪ್ರಶಾಂತ್ ರವರ ಕುಮ್ಮಕ್ಕಿನಿಂದ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿಯನ್ನುಂಟು ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಉಲ್ಲೇಖಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

Also Read  ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು

error: Content is protected !!
Scroll to Top