ನೂತನ ಡಿಸಿ ಆಗಿ ವಿದ್ಯಾಕುಮಾರಿ ನೇಮಕ| ಕೂರ್ಮಾರಾವ್ ಗೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಉಡುಪಿ, ಜು. 13. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಕೂರ್ಮಾರಾವ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮೊದಲು ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

error: Content is protected !!

Join the Group

Join WhatsApp Group