ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಪುತ್ರಿ- ವಶಕ್ಕೆ ಪಡೆದ ಖಾಕಿಪಡೆ

crime, arrest, suspected

(ನ್ಯೂಸ್ ಕಡಬ) newskadaba.com ಕುಂದಾಪುರ, ಜು. 13. ಹೊರರಾಜ್ಯದ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿ ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಪತ್ನಿಯ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಆರೊಪಿಯನ್ನು ಬೈಂದೂರು ನಿವಾಸಿ ಸೊಹೇಲ್ ಎಂದು ಗುರುತಿಸಲಾಗಿದೆ. ದೂರು ದಾಖಲಾದ ಹಿನ್ನೆಲೆ ಪ್ರಕರಣ ತನಿಖೆ ಚುರುಕುಗೊಳಿಸಿದ ಕುಂದಾಪುರ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ, ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಮೊದಲ ಪತಿಯನ್ನು ತ್ಯಜಿಸಿದ್ದ ಹೊರರಾಜ್ಯದ ಮಹಿಳೆಯೋರ್ವಳು ಆರೋಪಿ ಸೊಹೇಲ್ ನನ್ನು ಪ್ರೀತಿಸಿ ಮದುವೆಯಾಗಿ, ನಂತರ ಇವರಿಬ್ಬರು ಕುಂದಾಪುರ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ವಾಸವಾಗಿದ್ದರು. ಈ ವೇಳೆ ಮಹಿಳೆಯ ಮಗಳಿಗೆ ಸೊಹೇಲ್ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಈ ಕಾರಣದಿಂದ ಮಹಿಳೆ ಆತನಿಂದ ದೂರ ಹೋಗಿ ಬೇರೆಡೆ ಬಾಡಿಗೆ ಮನೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಾಗಿದ್ದಳು. ಅದಕ್ಕೂ ಬಿಡದ ಆತ ಬಾಡಿಗೆ ಮನೆಯಲ್ಲಿದ್ದ ಆಕೆ ಹಾಗೂ ಅವಳ ಮಗಳನ್ನು ತನ್ನ ಮನೆಗೆ ಕರೆದೊಯ್ದು ಇಬ್ಬರನ್ನೂ ಕೋಣೆಯಲ್ಲಿ ಕೂಡಿ ಹಾಕಿ, ಮಲ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದನು ಎಂದು ದೂರಲಾಗಿದೆ.

Also Read  ಕುದುರೆ ರೇಸ್ ಜೂಜು ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ

error: Content is protected !!
Scroll to Top