ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಶಕ್ತಿ ಯೋಜನೆಯಿಂದ ಸಿಡಿದೆದ್ದ ‘ಆಟೋ ರಾಜ’- ಜು. 28ರಂದು ಮುಷ್ಕರಕ್ಕೆ ಕರೆ – News Kadaba

ಶಕ್ತಿ ಯೋಜನೆಯಿಂದ ಸಿಡಿದೆದ್ದ ‘ಆಟೋ ರಾಜ’- ಜು. 28ರಂದು ಮುಷ್ಕರಕ್ಕೆ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 13. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಬಹುದೊಡ್ಡ ಹೊಡೆತ ಉಂಟಾಗಿದೆ.

ಈ ಯೋಜನೆಯಿಂದಾಗಿ ಪ್ರಯಾಣಿಕರು ಇಲ್ಲದೇ ಆಟೋ ಮತ್ತು ಟ್ಯಾಕ್ಸಿ ಚಾಲಕರು, ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಚಾಲಕರು ಜುಲೈ 28ರಂದು ರಾಜ್ಯಾಧ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ.


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಅಧ್ಯಕ್ಷ ಮಂಜುನಾಥ್, ಶಕ್ತಿ ಯೋಜನೆ ಜಾರಿಮಾಡಿದ ಬಳಿಕ ಆಟೋ ಮತ್ತು ಟ್ಯಾಕ್ಸಿ ಚಾಲಕರು ನಷ್ಟ ಅನುಭವಿಸುವಂತಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಆಟೋ ಚಾಲಕನಿಗೆ ಪ್ರತಿ ತಿಂಗಳು 10 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜುಲೈ 28ರಂದು 21 ಆಟೋ ಸಂಘಟನೆಗಳು ಹಾಗೂ ಖಾಸಗಿ ಬಸ್ ಒಕ್ಕೂಟ, ಶಾಲಾ ವಾಹನಗಳನ್ನು ಬಂದ್ ಮಾಡಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದರು. ಅಲ್ಲದೇ ಸರ್ಕಾರದಿಂದ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ 2 ಲಕ್ಷ ರೂ. ಸಾಲ ಸೌಲಭ್ಯ ನೀಡಬೇಕು. ಎಲೆಕ್ಟ್ರಿಕ್ ಆಟೋಗಳನ್ನು ರ್ಯಾಪಿಡೋ, ಓಲಾ, ಊಬರ್ ಕಂಪನಿಗೆ ನೋಂದಣಿ ಮಾಡುವುದನ್ನು ನಿಲ್ಲಿಸಬೇಕು ಎಂದರು.

Scroll to Top