(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 13. ಕರ್ನಾಟಕ ರಾಜ್ಯದ ಆರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಯಲ್ಳಕ ಅಲರ್ಟ್ ಘೋಷಿಸಿದ್ದು, ಗುರುವಾರದಂದು ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದ್ದು, ಕರಾವಳಿ ಬೆಲ್ಟ್ ಮತ್ತು ಕರ್ನಾಟಕದ ಒಳನಾಡಿನ ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 40 ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಅಲ್ಲದೇ ಕರ್ನಾಟಕದ ಉತ್ತರ ಭಾಗದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿರುವುದಾಗಿಯೂ ಹವಾಮಾನ ಇಲಾಖೆ ತಿಳಿಸಿದೆ.