ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ- ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ| 2 ಕರುಗಳ ಸಹಿತ ಎಂಟು ಜಾನುವಾರುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 13. ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ ಕುರಿತು ವರದಿಯಾಗಿದೆ.

ಬಂಧಿತರನ್ನು ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಾನುವಾರು ಸಾಗಾಟದ ಕುರಿತು ಖಚಿತ ಮಾಹಿತಿಯ ಪ್ರಕಾರ ಧರ್ಮಸ್ದಳ ಠಾಣೆಯ ಎಸ್ಸೈ ಅನಿಲ್ ಕುಮಾರ್ ನೇತೃತ್ವದ ತಂಡವು ಬುಧವಾರದಂದು ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದ ವೇಳೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಆರು ದನಗಳು, ಎರಡು ಗಂಡು ಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Also Read  ಕೆಲಸದ ವೇಳೆ ಕುಸಿದುಬಿದ್ದು ಕಾರ್ಮಿಕ ಸಾವು: ಮೃತದೇಹವನ್ನು ರಸ್ತೆ ಬದಿ ಇಟ್ಟು ಹೋದ ದುರುಳ


ವಶಕ್ಕೆ ಪಡೆದ ಜಾನುವಾರುಗಳ ಅಂದಾಜು ಮೌಲ್ಯ 65 ಸಾವಿರ ರೂ. ಹಾಗೂ ವಾಹನಗಳ ಅಂದಾಜು ಮೌಲ್ಯ 7 ಲಕ್ಷ ರೂ. ಸೇರಿದಂತೆ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ ರೂ 7.65 ಲಕ್ಷ ಎಂದು ಅಂದಾಜಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Also Read  ಹೆಚ್ಚಾಗಿ ಲವ್ ಮಾಡಿ ಮದುವೆ ಆಗುತ್ತಾರೆ ಈ 5 ರಾಶಿಯವರು!ನಿಜವಾದ ಪ್ರೀತಿ ಇವರಿಗೆ ಸಿಗುತ್ತದೆ. ನಿಮ್ಮ ರಾಶಿ ಇದ್ದೀಯ ತಿಳಿದುಕೊಳ್ಳಿ

error: Content is protected !!
Scroll to Top