ಶಾಲೆಯ ಬಳಿ ಬಾರ್ ತೆರೆಯದಂತೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ಇಲ್ಲಿನ ಬಾಳೆಪುಣಿ ಗ್ರಾಮದ ಶಾಲೆಯೊಂದರ ಬಳಿ ಬಾರ್ ಮತ್ತು ರೆಸ್ಟೋರೆಂಟ್ ತೆರೆಯುವುದನ್ನು ವಿರೋಧಿಸಿ ಶಾಲೆಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬುಧವಾರದಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಲಾ (ಶಾರದಾ ವಿದ್ಯಾಗಣಪತಿ ವಿದ್ಯಾಕೇಂದ್ರ) ಆಡಳಿತ ಮಂಡಳಿ ಅಧ್ಯಕ್ಷ ರಾಜಾರಾಂ ಭಟ್, ರೆಸ್ಟೋರೆಂಟ್ ಮುಚ್ಚುವವರೆಗೆ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು. ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬಾರ್& ರೆಸ್ಟೋರೆಂಟ್‌ಗೆ ಅನುಮತಿ ನೀಡಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಸಂಜೆ ಮನೆಗೆ ಹಿಂದಿರುಗುವಾಗ ವಿಶೇಷವಾಗಿ ಹುಡುಗಿಯರಿಗೆ ಅನಾನುಕೂಲವಾಗಿದೆ ಎಂದು ಆರೋಪಿಸಿದರು. ಅಲ್ಲದೇ ಶಾಲಾ ಪ್ರವೇಶ ದ್ವಾರದಿಂದ ಕೇವಲ 50 ಮೀಟರ್ ದೂರದಲ್ಲಿರುವ ಬಾರ್‌ನ ಪರವಾನಗಿ ರದ್ದುಪಡಿಸಬೇಕು ಎಂದು ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಬಾಳೆಪುಣಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜರೀನಾ ಅವರಿಗೆ ಮನವಿ ಪತ್ರ ಸಲ್ಲಿಸಿ ಬಾರ್ ಮುಚ್ಚುವಂತೆ ಒತ್ತಾಯಿಸಿದರು.

Also Read  ದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ➤ ಡಿಸಿ ರೋಹಿಣಿ ಸಿಂಧೂರಿ ಆದೇಶ

error: Content is protected !!
Scroll to Top