ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕೋಳಿ ಸಾಗಾಟದ ಪಿಕಪ್ – ಮನೆಯೊಳಗೆ ಮಲಗಿದ್ದ ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜು.14. ಕೋಳಿ ಸಾಗಾಟದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಇಳಿಜಾರಿನಲ್ಲಿದ್ದ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿದ್ದ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಬೆಳಗಿನ ಜಾವ ವಿಟ್ಲದಲ್ಲಿ ನಡೆದಿದೆ.

ಪೆರಿಯಲ್ತಡ್ಕ – ಸಾರಡ್ಕ ರಸ್ತೆಯ ವಿಟ್ಲ ಸಮೀಪದ ಕೂರೇಲು ಎಂಬಲ್ಲಿ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆಯ ಕೆಳಗಿನ ಪ್ರದೇಶದಲ್ಲಿದ್ದ ಹಂಚಿನ ಮನೆಯ ಮೇಲ್ಛಾವಣಿಗೆ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಮನೆಯೊಳಗೆ ಮಲಗಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಹೊರಬರಲಾರದೆ ಮನೆಯೊಳಗಡೆ ಸಿಲುಕಿಕೊಂಡಿದ್ದರು ಎನ್ನಲಾಗಿದೆ. ವಾಹನವನ್ನು ತೆರವುಗೊಳಿಸದೆ ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ತುರ್ತು ಸೇವಾ ತಂಡದ ಜೊತೆಗೆ ಕ್ರೇನ್ ಬಳಸಿ ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸರು ಮಹಿಳೆಯನ್ನು ಹೊರಗೆ ತೆಗೆದಿದ್ದಾರೆ.

Also Read  ಸರ್ಕಾರ ಆದಷ್ಟು ಬೇಗ ಜನಗಣತಿ ನಡೆಸಬೇಕು: ರಾಜ್ಯಸಭೆಯಲ್ಲಿ ಸೋನಿಯಾ ಗಾಂಧಿ ಆಗ್ರಹ

ಘಟನೆಯಿಂದಾಗಿ ಪಿಕಪ್ ವಾಹನದಲ್ಲಿದ್ದ ಹಲವು ಕೋಳಿಗಳು ಪ್ರಾಣಬಿಟ್ಟಿದ್ದು, ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

error: Content is protected !!
Scroll to Top