ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದು ಅಭಿನಂದನೆ ಸಲ್ಲಿಸಿದ ವಿರೇಂದ್ರ ಹೆಗ್ಗಡೆ- ಶಕ್ತಿ ಯೋಜನೆ ಬಗ್ಗೆ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜು. 14. ಇತ್ತೀಚೆಗೆ ಸಿಎಂ ಸಿದ್ಧರಾಮಯ್ಯ ಅವರು 14ನೇ ರಾಜ್ಯ ಬಜೆಟ್ ಮಂಡಿಸಿದ್ದು ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವರಿಗೆ ಧರ್ಮಸ್ಥಳದ ಧರ್ಮದರ್ಶಿ ಹಾಗೂ ರಾಜ್ಯಸಭಾ ಸದಸ್ಯರೂ ಆಗಿರುವ ಡಾ.ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.

ಜತೆಗೆ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿದ್ದಾರೆ. ತಮ್ಮ ಹೆಸರಿನಲ್ಲಿ ಮಂಜುನಾಥೇಶ್ವರನಿಗೆ ಮಹಿಳೆಯರು ಸೇವೆ ಮತ್ತು ಕಾಣಿಕೆಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದ್ದಾರೆ. ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ, ಪ್ರೋತ್ಸಾಹ ನೀಡಿರುವುದು ಸಮುದಾಯಕ್ಕೆ ಸಂತೋಷ ತಂದಿದೆ. ಅವಕಾಶ ಸಿಕ್ಕಾಗ ಮಂಜುನಾಥ ಸ್ವಾಮಿಯ ದರ್ಶನ ಪಡೆಯುವಂತೆ ಅವರು ಸಿದ್ದರಾಮಯ್ಯ ಅವರನ್ನು ಅಪೇಕ್ಷಿಸಿದ್ದಾರೆ. ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದೂ ಪತ್ರದಲ್ಲಿ ಬರೆದಿದ್ದಾರೆ.

Also Read  ಇಂದಿನ ಹವಾಮಾನ ವರದಿ

error: Content is protected !!
Scroll to Top