ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಜು. 25ರ ವರೆಗೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 14. ಇಲ್ಲಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ 2023-24ನೇ ಸಾಲಿಗೆ ಡಿಪ್ಲೊಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಇದೇ ಜು. 25ರ ವರೆಗೆ ಅವಧಿ ವಿಸ್ತರಿಸಲಾಗಿದೆ.


ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇ), ಕಮರ್ಷಿಯಲ್ ಪ್ರಾಕ್ಟೀಸ್(ಕ) ಹಾಗೂ ಲೈಬ್ರೆರಿ ಅಂಡ್ ಇನ್‍ ಫಾರ್ಮೇಶನ್ ಸೈನ್ಸ್ ಕೋರ್ಸ್‍ನ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ಭರ್ತಿ ಮಾಡಲಾಗುವುದು.  ಬೋಂದೆಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಪರ್ಕಿಸಿ ನೇರವಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2482334, 9611320910, 9844744845 ಅನ್ನು ಸಂಪರ್ಕಿಸುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಅದಿತಿ ಪ್ರಭುದೇವಾ ನಟನೆಯ ‘ಅಲೆಕ್ಸಾ’ ನವೆಂಬರ್ ನಲ್ಲಿ ಬಿಡುಗಡೆಗೆ ಸಜ್ಜು

error: Content is protected !!
Scroll to Top