ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪ್ರಧಾನಿ ಮೋದಿ ಮಾತು ಕೇಳ್ತಾ ಇದ್ರೆ ನಾನೇ ಸಿಎಂ ಆಗಿರುತ್ತಿದ್ದೆ- ಎಚ್.ಡಿ.ಕೆ ಬಾಂಬ್..! – News Kadaba

ಪ್ರಧಾನಿ ಮೋದಿ ಮಾತು ಕೇಳ್ತಾ ಇದ್ರೆ ನಾನೇ ಸಿಎಂ ಆಗಿರುತ್ತಿದ್ದೆ- ಎಚ್.ಡಿ.ಕೆ ಬಾಂಬ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 14. ಪ್ರಧಾನಿ ನರೇಂದ್ರ ಮೋದಿ ಅವರ ಮಾತು ಕೇಳಿ ತೀರ್ಮಾನ ಮಾಡಿದ್ದರೆ ಕಳೆದ ಐದು ವರ್ಷಗಳ ಪೂರ್ಣ ಅವಧಿಗೆ ನಾನೇ ಸಿಎಂ ಆಗಿರುತ್ತಿದ್ದೆ” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

ಗುರುವಾರದಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉತ್ತರ ನೀಡುತ್ತಾ ಆಪರೇಷನ್ ಕಮಲದ ಪ್ರಸ್ತಾಪವಾಯಿತು. ಅಷ್ಟರಲ್ಲಿ ಮಧ್ಯಪ್ರವೇಶಿಸಿದ ಮಾತನಾಡಿದ ಹೆಚ್ಡಿಕೆ, ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಆಪರೇಷನ್ ಹಸ್ತ ಎಂಬ ಸುದ್ದಿ ಹರಿದಾಡುತ್ತಿದೆ ಎಂದಾಗ ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಏಕೆ ಅವರ ಜೊತೆ ಸೇರಿಕೊಂಡಿದ್ದೀರಿ ಎಂದು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.

ಸಿಎಂ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಜೊತೆಗೆ ಸಮ್ಮಿಶ್ರ ಸರಕಾರ ನಡೆಸುತ್ತಿದ್ದ ಸಂದರ್ಭದಲ್ಲಿ 2019ರ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಕರೆದು ಒಂದೂವರೆ ಗಂಟೆಗಳ ಕಾಲ ಚರ್ಚಿಸಿ, ಮುಂದಿನ ನಾಲ್ಕು ವರ್ಷ ಯಾವುದೇ ಸಮಸ್ಯೆ ಇರಲ್ಲ, ಸರ್ಕಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಆಹ್ವಾನ‌‌ ನೀಡಿದ್ದರು. ಆದರೆ ನಾನು ಅದನ್ನು ತಿರಸ್ಕರಿಸಿ, ಕಪ್ಪು ಚುಕ್ಕೆ ಬರಬಾರದೆಂಬ ಕಾರಣಕ್ಕೆ ಮುಂದುವರಿದೆ‌ ಎಂದು ಕುಮಾರಸ್ವಾಮಿ ಹೇಳಿದರು.

Scroll to Top