ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

(ನ್ಯೂಸ್ ಕಡಬ) newskadaba.com ಫ್ರಾನ್ಸ್, ಜು. 14. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್​ನ ಅತ್ಯುನ್ನತ ಗೌರವವಾದ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್’ ಪುರಸ್ಕಾರವನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದರು. ಎಲಿಸೀ ಅರಮನೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರಿಗೆ ಫ್ರಾನ್ಸ್ ಅತ್ಯುನ್ನತ ಪುರಸ್ಕಾರ ನೀಡಲಾಯಿತು.

ಈ ಮೂಲಕ ಫ್ರಾನ್ಸ್​ನ ಅತ್ಯುನ್ನತ ಗೌರವ ಸ್ವೀಕರಿಸಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾದರು. ಪ್ರಧಾನಿ ಮೋದಿಯವರಿಗಿಂತ ಮೊದಲು, ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ, ಆಗಿನ ವೇಲ್ಸ್ ರಾಜಕುಮಾರ ಕಿಂಗ್ ಚಾರ್ಲ್ಸ್, ಜರ್ಮನಿಯ ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್, ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ, ಆಗಿನ ಪ್ರಿನ್ಸ್ ಆಫ್ ವೇಲ್ಸ್, ಜರ್ಮನಿಯ ಮಾಜಿ ಚಾನ್ಸೆಲರ್ ಇತರ ನಾಯಕರು ಈ ಪ್ರಶಸ್ತಿಗೆ ಪಾತ್ರರಾಗಿದ್ದರು.

Also Read  ವಾಷಿಂಗ್ಟನ್: ಇಂದು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ

error: Content is protected !!
Scroll to Top