(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮೀ ಯೋಜನೆ ಸುಲಭ ಜಾರಿಗೆ ಪ್ರತೀ 1ಸಾವಿರ ಜನರಿಗೆ ಪ್ರಜಾ ಪ್ರತಿನಿಧಿ ನೇಮಕ ಮಾಡಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ.
ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದ್ದು, ಪ್ರತಿ 1 ಸಾವಿರ ಜನರಿಗೆ ಅಥವಾ ಒಂದು ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತಿದೆ ಎನ್ನಲಾಗಿದೆ.
ಪ್ರಜಾಪ್ರತಿನಿಧಿ ನೇಮಕವು ಒಂದು ತಿಂಗಳ ಕಾಲಾವಧಿಗೆ ಮಾತ್ರ ನಿರ್ಧರಿಸಲಾಗಿದ್ದು, ಗೃಹಲಕ್ಷ್ಮೀ ಯೋಜನೆಯ ಅರ್ಜಿದಾರರು ಗ್ರಾಮ್ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್‌ಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಜೊತೆಗೆ ಸೇವಾ ಕೇಂದ್ರಗಳ ಮೇಲಿನ ಒತ್ತಡ ತಪ್ಪಿಸಲು ಮೊಬೈಲ್ ಆಯಪ್ ಮೂಲಕವೂ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗುವುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.