ಗೃಹಲಕ್ಷ್ಮೀ ಯೋಜನೆಗೆ ಡೇಟ್ ಫಿಕ್ಸ್.! – ಜುಲೈ 19ರಿಂದ ಅರ್ಜಿ ಸಲ್ಲಿಕೆ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 15. ಗೃಹಲಕ್ಷ್ಮಿ ಯೋಜನೆ ನಿರೀಕ್ಷೆಯಲ್ಲಿ ಕಾದು ಕುಳಿತಿದ್ದ ಮಹಿಳೆಯರಿಗೆ ಕೊನೆಗೂ ಗುಡ್‌ನ್ಯೂಸ್‌ ಸಿಕ್ಕಿದೆ. ಇದೇ ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ಪ್ರಕಟಿಸಿದೆ.

ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸುದ್ದಿಗೋಷ್ಠಿ ನಡೆಸಿ, ಜು.17 ರ ಸೋಮವಾರದಂದು ಗೃಹಲಕ್ಷ್ಮಿ ಯೋಜನೆ ಆ್ಯಪ್‌ಗೆ ಚಾಲನೆ ನೀಡಲಾಗುವುದು. ಜು. 19 ರಿಂದ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

 


ಅಂದಹಾಗೆ ಈ ಯೋಜನೆಗೆ ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಯಾರನ್ನು ಗುರುತಿಸಲಾಗಿದೆಯೋ ಅವರೇ ಈ ಯೋಜನೆಯ ಅರ್ಹರಾಗಿರುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಜಿಎಸ್‌ಟಿ ಪಾವತಿದಾರರಾಗಿರಬಾರದು. ಅಂತಹವರಿಗೆ ಈ ಯೋಜನೆ ಸೌಲಭ್ಯ ಸಿಗಲಿದೆ ಎಂದು ಸ್ಪಷ್ಟನೆ ನೀಡಿದರು.

Also Read  ರಾಜ್ಯದಲ್ಲಿ ಲಾಕ್‍ಡೌನ್ ಮತ್ತೆ ಮುಂದುವರಿಕೆ..? ➤ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ


ಈಗಾಗಲೇ ಪಡಿತರ ಕಾರ್ಡ್‌ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ಅರ್ಜಿ ಸಲ್ಲಿಕೆಯ ದಿನಾಂಕ, ಸಮಯ ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರಗಳನ್ನು SMS ಮೂಲಕ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು. ಗ್ರಾಮಾಂತರ ಪ್ರದೇಶದಲ್ಲಿರುವವರು ತಾವು ವಾಸಿಸುವ ಗ್ರಾಮದ ಸಮೀಪವಿರುವ ಗ್ರಾಮ-ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಹಾಗೆಯೇ ನಗರ ಪ್ರದೇಶದಲ್ಲಿರುವವರು ಸಮೀಪವಿರುವ ಕರ್ನಾಟಕ-ಒನ್, ಬೆಂಗಳೂರು-ಒನ್, ಬಿಬಿಎಂಪಿ ವಾರ್ಡ್ ಕಚೇರಿ ಮತ್ತು ಸ್ಥಳೀಯ ನಗರಾಡಳಿತ ಸಂಸ್ಥೆಯ ಕಚೇರಿಗಳಲ್ಲಿ ಅರ್ಜಿ ಹಾಕಬಹುದು ಎಂದು ತಿಳಿಸಿದರು.

Also Read  ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್​ ರಾವ್ ಚವಾಣ್ ಮೃತ್ಯು

error: Content is protected !!
Scroll to Top