ಸ್ಮಶಾನದ ಕೊರತೆ- ಮೃತದೇಹವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 15. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ಸ್ಮಶಾನ ಇಲ್ಲದೇ ಇರುವುದರಿಂದ  ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಕುರಿತು ವರದಿಯಾಗಿದೆ.

ಗ್ರಾಮಸಭೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವು ಬಾರಿ ಬೇಡಿಕೆ ಇಟ್ಟಿದ್ದರೂ ಜನಪ್ರತಿನಿಧಿಗಳು ಯಾರೂ ಕೂಡಾ ಗ್ರಾಮಸ್ಥರ ಮನವಿಗೆ ಸ್ಪಂದಿಸಿಲ್ಲ ಎಂದು ತಿಳಿದು ಬಂದಿದೆ. ಜುಲೈ 14 ರಂದು ಜನತಾ ಕಾಲನಿಯ ನಿವಾಸಿಯೊಬ್ಬರು ಮೃತಪಟ್ಟಿದ್ದು, ಮೃತದೇಹವನ್ನು ಪಂಚಾಯತ್ ಎದುರು ಇಟ್ಟು ಊರವರು ಪ್ರತಿಭಟನೆಗೆ ಊರವರು ಮುಂದಾಗಿದ್ದಾರೆ. ಒಂದು ವೇಳೆ ಸ್ಪಂದನೆ ಸಿಗದಿದ್ದಲ್ಲಿ ಅವರ ಅಂತ್ಯ ಸಂಸ್ಕಾರವನ್ನು ನೆರಿಯ ಗ್ರಾಮ ಪಂಚಾಯತ್ ಎದುರೇ ಮಾಡುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿರುವುದಾಗಿ ತಿಳಿದು ಬಂದಿದೆ.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಿದ್ದು, ಆದರೆ ಆಕ್ರೋಶಿತ ಗ್ರಾಮಸ್ಥರು ‘ನಮಗೆ ಜಾಗ ಇವತ್ತೇ ನಿಗದಿಪಡಿಸಬೇಕು. ಇಷ್ಟು ವರ್ಷ ಬೇಡಿಕೆ ಈಡೇರಿಕೆ ಆಗಿಲ್ಲ. ಆದ್ದರಿಂದ ಸ್ಮಶಾನ ಆಗುವ ತನಕ ಪಂಚಾಯತ್ ಗೆ ಬೀಗ ಹಾಕಿ’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group