ಪರವಾನಗಿ ಇಲ್ಲದೇ ಜಾನುವಾರು ಸಾಗಾಟ- ವಾಹನ ವಶಕ್ಕೆ

crime, arrest, suspected

(ನ್ಯೂಸ್ ಕಡಬ) newskadaba.com ಸುಳ್ಯ, ಜು. 15. ಪರವಾನಿಗೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಪೊಲೀಸರು ವಶಕ್ಕೆ ಪಡೆದ ಘಟನೆ ಅರ್ತಾಜೆ ಎಂಬಲ್ಲಿ ನಡೆದಿದೆ.

ಪಿಕಪ್ ವಾಹನದಲ್ಲಿ ಬೆಳ್ಳಾರೆಯಿಂದ ಸೋಣಂಗೇರಿ ಮಾರ್ಗವಾಗಿ ಕೇರಳಕ್ಕೆ ಜಾನುವಾರು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಅರ್ತಾಜೆ ಎಂಬಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಎಮ್ಮೆ ಹಾಗೂ ಎರಡು ಕರುಗಳಿದ್ದವು ಎನ್ನಲಾಗಿದೆ. ಚಾಲಕನನ್ನು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸಿದಾಗ ಪರವಾನಗಿ ಇಲ್ಲದಿರುವುದು ಕಂಡುಬಂದಿದೆ.

Also Read  ಸರ್ಫಿಂಗ್: ಇಂದು ಚಾಲನೆ

error: Content is protected !!
Scroll to Top