ಅಪರಿಚಿತ ವಾಹನ ಢಿಕ್ಕಿ ► ಪೊಲೀಸ್ ಕಾನ್ಸ್‌ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com ಹಳೇಬೀಡು, ಜ. 27. ಅಪರಿಚಿತ ವಾಹನ‌ವೊಂದು ಢಿಕ್ಕಿಹೊಡೆದ ಪರಿಣಾಮ ಪೊಲೀಸ್ ಕಾನ್ಸ್‌ಟೇಬಲ್ ಓರ್ವರು ಮೃತಪಟ್ಟ ಘಟನೆ ಹಳೇಬೀಡು-ಜಾವಗಲ್ ರಸ್ತೆಯಲ್ಲಿ ಶನಿವಾರದಂದು ನಡೆದಿದೆ.

ಮೃತರನ್ನು ಹಳೇಬೀಡು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ನಾಗರಾಜ್ (29) ಎಂದು ಗುರುತಿಸಲಾಗಿದೆ. ನಾಗರಾಜ್ ‌ಶನಿವಾರ ಮಧ್ಯಾಹ್ನ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ಬಗ್ಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮುಡಾ ಹಗರಣ: ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮಾಜಿ ಆಯುಕ್ತ ಪರಾರಿ

error: Content is protected !!
Scroll to Top