(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ಜು. 17. ಇಲ್ಲಿನ ಕೇದಾರನಾಥ ದೇವಾಲಯದ ಆವರಣದಲ್ಲಿ ಭಕ್ತರು ಛಾಯಾಚಿತ್ರ ತೆಗೆಯುವುದು ಮತ್ತು ವಿಡಿಯೋ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ.
ಇತ್ತೀಚೆಗೆ ಮಹಿಳಾ ಯೂಟ್ಯೂಬ್ ಬ್ಲಾಗರ್ ಓರ್ವರು ದೇವಸ್ಥಾನದ ಮುಂದೆ ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ಇದೀಗ ಕೇದಾರನಾಥ ದೇವಾಲಯ ಸಮಿತಿಯು ದೇವಳದ ಆವರಣದಲ್ಲಿ ಮೊಬೈಲ್ ಫೋನ್‌ಗಳೊಂದಿಗೆ ದೇವಾಲಯದ ಆವರಣವನ್ನು ಪ್ರವೇಶಿಸಬೇಡಿ, ದೇವಾಲಯದ ಒಳಗೆ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಮತ್ತು ನೀವು ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿರುತ್ತೀರಿ ಎಂಬ ಬೋರ್ಡ್‌ಗಳನ್ನು ಹಾಕಲಾಗಿದೆ.
ಅಲ್ಲದೇ ದೇವಾಲಯವು ಜನರನ್ನು “ಯೋಗ್ಯ ಬಟ್ಟೆಗಳನ್ನು” ಧರಿಸಲು ಮತ್ತು ದೇವಾಲಯದ ಆವರಣದಲ್ಲಿ ಡೇರೆಗಳು ಅಥವಾ ಶಿಬಿರಗಳನ್ನು ಸ್ಥಾಪಿಸದಂತೆ ಕೇಳಿಕೊಂಡಿದೆ. ಆದೇಶವನ್ನು ಪಾಲಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೋರ್ಡ್‌ಗಳಲ್ಲಿ ತಿಳಿಸಲಾಗಿದೆ.