ಭಾರೀ ಮಳೆ ಸಾಧ್ಯತೆ – ಕರಾವಳಿಯ ಮೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಕರಾವಳಿ ಜಿಲ್ಲೆಗಳಾದ್ಯಂತ ಭಾರೀ ಮಳೆಯಾಗಲಿರುವ ಸಾಧ್ಯತೆಯ ಹಿನ್ನೆಲೆ ಭಾನುವಾರದಿಂದ ಐದು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಂದಾಪುರದಲ್ಲಿ ಶನಿವಾರದವರೆಗೆ 7 ಸೆಂ.ಮೀ, ಪಣಂಬೂರು, ಕೋಟ ಮತ್ತು ಉಪ್ಪಿನಂಗಡಿಯಲ್ಲಿ ನಾಲ್ಕು ಸೆಂ.ಮೀ ಮಳೆಯಾಗಿದ್ದರೆ, ಮಂಗಳೂರು, ಮಾಣಿ ಮತ್ತು ಉಡುಪಿಯಲ್ಲಿ ಮೂರು ಸೆಂ.ಮೀ ಮಳೆಯಾಗಿದೆ. ಕೊಣಾಜೆ, ಹರೇಕಳ ಭಾಗದಲ್ಲಿ ಮಣ್ಣು ಕುಸಿದು ಮನೆಗಳಿಗೆ ಹಾನಿಯಾದ ಘಟನೆಗಳು ವರದಿಯಾಗಿವೆ. ದಕ್ಷಿಣ ಕನ್ನಡದ ವಿವಿಧ ಭಾಗಗಳಲ್ಲಿ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಕಳೆದ ಎರಡು ದಿನಗಳಿಂದ ದ.ಕ ಮತ್ತು ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Also Read  ಪ್ರತಿಯೊಬ್ಬರಲ್ಲಿ ಪರಿಸರ ಪ್ರಜ್ಞೆ ಅಗತ್ಯ - ಡಾ|| ಚೂಂತಾರು

error: Content is protected !!
Scroll to Top