ಸುಳ್ಯ: ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 17. ಮನೆಯೊಂದರ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲಿನಲ್ಲಿ ರವಿವಾರದಂದು ರಾತ್ರಿ ಸಂಭವಿಸಿದ ಬಗ್ಗೆ ವರದಿಯಾಗಿದೆ.


ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಮತ್ತು ಅವರ ಮನೆಯವರು ಸಂಬಂಧಿಯೊಬ್ಬರು ನಿಧನರಾದ ಹಿನ್ನೆಲೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು. ರವಿವಾರದಂದು ರಾತ್ರಿ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭವನ್ನು ಗಮನಿಸಿದ ಕಳ್ಲರು ಮನೆಯ ಹಿಂಬಾಗಿಲನ್ನು ಮುರಿದು ಒಳನುಗ್ಗಿ ಕಳ್ಳರು ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿರುವುದಾಗಿ ತಿಳಿದುಬಂದಿದೆ.

Also Read  ಗುರುವಾಯ‌ನ'ಕೆರೆ'ಯಲ್ಲಿ ಮೀನುಗಳ ಅಸಹಜ ಸಾವು ➤ ಏಲಂ ಮೂಲಕ ಕೆರೆಯನ್ನು ಪಡೆದ ವ್ಯಕ್ತಿಗೆ ಪರಿಹಾರ ಧನ ನೀಡಲು ಎಸ್ಡಿಪಿಐ ಆಗ್ರಹ

error: Content is protected !!
Scroll to Top