ಸಂಪ್ಯ: 18 ವರ್ಷಗಳ ಹಿಂದಿನ ಪ್ರಕರಣದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.28. ಸುಮಾರು 18 ವರುಷಗಳ ಹಿಂದೆ ಪ್ರಕರಣವೊಂದರಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಎಲ್ ಪಿಸಿ ವಾರಂಟ್ ಆರೋಪಿಯೊಬ್ಬನನ್ನು ಸಂಪ್ಯ ಪೊಲೀಸರು ಬಂಧಿಸಿದ ಘಟನೆ ಶನಿವಾರದಂದು ನಡೆದಿದೆ.

ಬಂಧಿತ ಆರೋಪಿಯನ್ನು ಕಾಸರಗೋಡಿನ ಇಂದಿರಾನಗರದ ಪೂಡಿಪಲ್ಲಿ ನಿವಾಸಿ ಅಹಮ್ಮದ್ ಎಂಬವರ ಪುತ್ರ ಹಾರೀಸ್(38) ಎಂದು ಗುರುತಿಸಲಾಗಿದೆ. ಆರೋಪಿಯು ಸುಮಾರು 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ಕಾಸರಗೋಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಕಾರ್ಯಾಚರಣೆಯಲ್ಲಿ ಪಿಎಸ್ಐ ಅಬ್ದುಲ್ ಖಾದರ್ ರವರ ನೇತೃತ್ವದಲ್ಲಿ ಅಪರಾಧ ಸಿಬ್ಬಂದಿಗಳಾದ ಅಬ್ದುಲ್ ರಹಿಮಾನ್, ವಿನಯ್ ಕುಮಾರ್ ರವರು ಬಂಧಿಸಿದ್ದು ಪತ್ತೆಗೆ ಎಎಸ್ಐ ರುಕ್ಮ ನಾಯ್ಕ್ ,ಹೆಚ್ ಸಿ ಚಂದ್ರ, ಪಿಸಿ ಅಬ್ದುಲ್ ರವೂಫ್ ರವರು ಸಹಕರಿಸಿರುತ್ತಾರೆ.

Also Read  ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ: ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಜಾರಿ

error: Content is protected !!
Scroll to Top