ಕಡಬ: ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಪ್ರಕರಣ – ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಕಡಬ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಜು.17. ಮನೆಗೆ ನುಗ್ಗಿ ಚಿನ್ನಾಭರಣ ಕಳವು ಮಾಡಿದ ಆರೋಪಿಗಳನ್ನು ಸುಮಾರು ಒಂದೂವರೆ ವರ್ಷಗಳ ನಂತರ ಕಡಬ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪೇರಡ್ಕ ಪೆಲತ್ರಾಣೆ ನಿವಾಸಿ ಸದ್ದಾಂ ಮತ್ತು ಮೀನಾಡಿ ನಿವಾಸಿ ತಾಜುದ್ದೀನ್ ಎಂದು ಗುರುತಿಸಲಾಗಿದೆ. ಆರೋಪಿಗಳು 2021 ರ ಡಿಸೆಂಬರ್ 13 ರಂದು ಪೇರಡ್ಕ ನಿವಾಸಿ ಸಾಜನ್ ಎಂಬವರ ಮನೆಯಿಂದ ಹಗಲಿನಲ್ಲಿ ಸುಮಾರು 41 ಗ್ರಾಂ. ಚಿನ್ನಾಭರಣವನ್ನು ಎಗರಿಸಿದ್ದರು. ಸಾಜನ್ ಎಂಬವರು ಸಂಜೆ ವೇಳೆಗೆ ಮನೆಗೆ ಬಂದಾಗ ಹಿಂಭಾಗದ ಬಾಗಿಲನ್ನು ಒಡೆದಿರುವುದು ಕಂಡುಬಂದಿದ್ದು, ಈ ಸಮಯದಲ್ಲಿ ಮನೆಯಲ್ಲಿ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿತ್ತು. 24 ಗ್ರಾಂ ತೂಕದ ಚಿನ್ನದ ಸರ, 8 ಗ್ರಾಂ ತೂಕದ ಚಿನ್ನದ ಸರ, ಹಾಗೂ 6 ಗ್ರಾಂ ತೂಕದ ಚಿನ್ನದ ಬೆಂಡೋಲೆ, ಮಕ್ಕಳ ಬೆಂಡೋಲೆಗಳು ಸೇರಿದಂತೆ 1.50 ಲಕ್ಷ ರೂ. ಮೌಲ್ಯದ ಸುಮಾರು 41 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಪೈಕಿ ಸದ್ದಾಂ ಎಂಬಾತನು ಈ ಹಿಂದೆ ನಡೆದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಆರೋಪಿಯಾಗಿದ್ದಾನೆ. ಈತನ ಮೊಬೈಲ್ ಸಿಡಿಆರ್ ಆಧಾರದಲ್ಲಿ ಕಳ್ಳತನ ಪ್ರಕರಣವನ್ನು ಒಂದೂವರೆ ವರ್ಷದ ನಂತರ ಕಡಬ ಪೊಲೀಸರು ಪತ್ತೆಹಚ್ಚಿದ್ದಾರೆ.

error: Content is protected !!

Join the Group

Join WhatsApp Group