ಬಿಜೆಪಿ ರಾಜ್ಯಾಧ್ಯಕ್ಷ ನೀಡದಿದ್ದಲ್ಲಿ ಮುಂದಿನ ತೀರ್ಮಾನ- ಎಚ್ಚರಿಕೆ ಕೊಟ್ಟ ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ದುಡಿಯುವೆ. ಒಂದುವೇಳೆ ಕೊಡದೇ ಹೋದಲ್ಲಿ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಅವರು ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಗೋವಿಂದರಾಜನಗರ ಕ್ಷೇತ್ರದ ವಾರ್ಡ್‌ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನಾನು 365 ದಿನವೂ ಜನರ ನಡುವೆಯಿದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ಕೇಳಿದ್ದೇನೆ. ಗೋವಿಂದರಾಜನಗರ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ರಾಜ್ಯದಲ್ಲೇ ಮಾದರಿ ವಿಧಾನ ಸಭಾ ಕ್ಷೇತ್ರವನ್ನಾಗಿ ರೂಪಿಸಿದ್ದೇನೆ. ಬಿಜೆಪಿಯ ಹೈಕಮಾಂಡ್‌ ಮಾತಿಗೆ ಗೌರವ ನೀಡಿ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಆದರೆ ಹಿರಿಯ ಮುಖಂಡರ ಪಕ್ಷ ವಿರೋಧಿ ಚಟುವಟಿಕೆಯಿಂದ ನನಗೆ ಸೋಲುಂಟಾಯಿತು ಎಂದು ಅವರು ಬೇಸರ ವ್ಯಕ್ತಪಡಿಸಿದರು.

Also Read  4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ  ಪೋಕ್ಸೊ ಪ್ರಕರಣ ದಾಖಲು

error: Content is protected !!
Scroll to Top