ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮಹಾಘಟ್ ಬಂಧನ್ ಹೆಸರಿನ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರನ್ನು ಹೆಚ್‌ಎಎಲ್‌ ವಿಮಾನದಲ್ಲಿ ಎಐಸಿಸಿ ಅಧಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ ಸ್ವಾಗತಿಸಿದರು.

ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ಇಂದು ಮತ್ತು ನಾಳೆ(ಜುಲೈ 17-18ರಂದು) ಸಭೆ ನಡೆಯಲಿದ್ದು, ಅದರಲ್ಲಿ ಒಟ್ಟು 26 ಪಕ್ಷಗಳ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಭೆಯ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದು, ಖಾಸಗಿ ಹೊಟೇಲ್ ನಲ್ಲಿ ನಾಯಕರಿಗೆ ಉಳಿದುಕೊಳ್ಳಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಇಂದು ಸಂಜೆ 6 ಗಂಟೆಗೆ ಅನೌಪಚಾರಿಕ ಸಭೆಯೊಂದು ನಡೆಯಲಿದ್ದು ಅದರ ಬಳಿಕ ಎಲ್ಲಾ ನಾಯಕರಿಗೆ ಸಿಎಂ ಸಿದ್ದರಾಮಯ್ಯ ರಾತ್ರಿ ಔತಣಕೂಟ ಏರ್ಪಡಿಸಿದ್ದಾರೆ. ನಾಳೆ ಜುಲೈ 18ರಂದು ಬೆಳಗ್ಗೆ 11 ಗಂಟೆಗೆ ಆರಂಭವಾಗುವ ಸಭೆ ಸಾಯಂಕಾಲ 4 ಗಂಟೆಯವರೆಗೆ ನಡೆಯಲಿದೆ ಎನ್ನಲಾಗಿದೆ.

Also Read  ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ

error: Content is protected !!
Scroll to Top