(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 18. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಈಗಾಗಲೇ ನೋಂದಣಿ ಶುರುವಾಗಿದ್ದು, 1 ತಿಂಗಳಲ್ಲಿ ಬರೋಬ್ಬರಿ 1.09 ಕೋಟಿ ಗ್ರಾಹಕರು ನೋಂದಣಿ ಮಾಡಿಸಿಕೊಂಡಿದ್ದಾರೆ.
ಇದೀಗ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಮೂರು ವಿದ್ಯುತ್ ಸಂಬಂಧಿ ಯೋಜನೆಗಳಾದ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಹಾಗೂ ಅಮೃತ ಜ್ಯೋತಿ ಯೋಜನೆಗಳನ್ನು ಗೃಹಜ್ಯೋತಿಯಲ್ಲಿ ವಿಲೀನ ಮಾಡಿ ಸರಕಾರ ಆದೇಶಿಸಿದೆ. ಈ ಮೂಲಕ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜ್ಯೋತಿಯ ನೇರ ಲಾಭ ಸಿಗಲಿದೆ.
ಈಗಾಗಲೇ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಗಳ ಫಲಾನುಭವಿ ಕುಟುಂಬಗಳಿಗೆ 40 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತಿತ್ತು. ಇದೀಗ ಮತ್ತೆ ಈ ಎರಡು ಯೋಜನೆಗಳನ್ನು ಗೃಹಜ್ಯೋತಿ ಯೋಜನೆಯೊಂದಿಗೆ ವಿಲೀನ ಮಾಡಲಾಗಿದ್ದು , 53 ಯೂನಿಟ್ ಹಾಗೂ ಶೇ.10 ರಷ್ಟು ಹೆಚ್ಚುವರಿ ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಿದೆ.