ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ➤ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)newskadaba.com ಕಾಪು, ಜು.18. ಕಟಪಾಡಿಯಲ್ಲಿ ಇಬ್ಬರು ಕಾರ್ಮಿಕರ ನಡುವಿನ ಗಲಾಟೆಯಾಗಿ ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಕಾಪುವಿನಲ್ಲಿ ವರದಿಯಾಗಿದೆ. ಮೃತ ಕಾರ್ಮಿಕನನ್ನು ಒರಿಸ್ಸಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಇವರು ಕಟಪಾಡಿ ಶಿರ್ವ ರಸ್ತೆ ಬಳಿಯಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು ಎನ್ನಲಾಗಿದೆ.

ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರೂ ಹೊಡೆದಾಟ ನಡೆಸಿದ್ದು, ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Also Read  ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

ಇನ್ನು ಹತ್ಯೆಗೆ ಕಾರಣನಾದ ಕಾರ್ಮಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

 

 

error: Content is protected !!
Scroll to Top