ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ – News Kadaba

ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಪೊಲೀಸರು ಯಶಸ್ವಿಯಾಗಿದ್ದಾರೆ. ಕಣ್ಣೂರು ಅಡ್ಯಾರ್‌ ನಿವಾಸಿ ಹಸೈನಾರ್‌ ಆಲಿಯಾಸ್‌ ಹಸೈನ್‌(35) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಯುವತಿಯೋರ್ವಳು ಲೇಡಿಹಿಲ್‌ ಸಮೀಪ ಫ್ಲ್ಯಾಟ್‌ ಕಡೆಗೆ ಹೋಗುತ್ತಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಗೆ ಯುವತಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಎನ್ನಲಾಗಿದೆ.

ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು 4 ತಿಂಗಳ ಕಾರಾಗೃಹ ಶಿಕ್ಷೆ ತೀರ್ಪು ಪ್ರಕಟವಾಗಿತ್ತು. ಆದರೆ ಆರೋಪಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ವಾರಂಟ್‌ ಹೊರಡಿಸಲಾಗಿದ್ದು, ಈ ಹಿನ್ನೆಲೆ ಈತನನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

 

Scroll to Top