ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್ ➤ ಜಾಗ್ರತೆ ವಹಿಸಲು SP ಸೂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಜು.18. ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್‌ ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಈ ರೀತಿಯ ನಕಲಿ ಅಪ್ಲಿಕೇಷನ್‌ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್‌ ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸಾಪ್ ಮೂಲಕ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ ನ್ನು ಬಳಸಬಾರದು. ಈ ರೀತಿಯಾದ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು.

 

Scroll to Top