ಇನ್ಮುಂದೆ ದೇವಾಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ತಮಿಳುನಾಡಿನ ಬಳಿಕ ಕರ್ನಾಟಕದ ದೇವಾಸ್ಥಾನಗಳ ಒಳಗಡೆ ಮೊಬೈಲ್ ಫೋನ್ ನಿಷೇಧ ಹೇರಲಾಗಿದ್ದು, ಮೊಬೈಲ್ ಫೋನ್ ಬಳಕೆ ನಿಷೇಧದ ಬಗ್ಗೆ ಮೊದಲಿನಿಂದ ಚರ್ಚೆ ನಡೆಯುತ್ತಿತ್ತು ಎನ್ನಲಾಗಿದೆ.


ಅಧಿಕೃತವಾಗಿ ಫೋನ್ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Also Read  'ಕಾಂಗ್ರೆಸ್ ನಾಯಕರೇ ಜಾಮೀನು ಪಡೆದು ಚುನಾವಣೆ ಎದುರಿಸುತ್ತಿದ್ದಾರೆ' ➤ ಸಿಎಂ ಬೊಮ್ಮಾಯಿ

error: Content is protected !!
Scroll to Top