ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಕೊಲೆಗಳ ಪ್ರಕರಣ ➤ ಎಸ್‌ಐಟಿ ತನಿಖೆಗೆ ಕಾಂಗ್ರೆಸ್ ನಾಯಕ ಒತ್ತಾಯ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.18. ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಹತ್ಯೆಗಳ ಬಗ್ಗೆ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಸಚಿವ ಬಿ ರಮಾನಾಥ್ ರೈ ಒತ್ತಾಯಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ರೈ, ಕಾಂಗ್ರೆಸ್ ಸರ್ಕಾರ ಆಡಳಿತ ವಹಿಸಿಕೊಂಡು ಎರಡು ತಿಂಗಳು ಪೂರ್ಣಗೊಳ್ಳುವ ಮುನ್ನವೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸುತ್ತಿದ್ದಾರೆ. ಕಟೀಲು ತಪ್ಪು ಮಾಹಿತಿ ರವಾನಿಸಿ ಕೊಲೆಗೆ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವೇ ಕಾರಣ ಎಂಬ ಭಾವನೆ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ದೂರಿದರು ಎನ್ನಲಾಗಿದೆ.

Also Read  ಇಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

error: Content is protected !!
Scroll to Top