ಪರೀಕ್ಷೆ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ಪರೀಕ್ಷೆ ವೇಳೆ ಮೊಬೈಲ್ ಫೋನ್ ಬಳಸಿ ಸಿಕ್ಕಿ ಬಿದ್ದ 19 ವರ್ಷದ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಹಾರಿ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದಕ್ಷಿಣ ಬೆಂಗಳೂರಿನ ಗಿರಿನಗರ ಸಮೀಪದ ಪಿಇಎಸ್ ಕಾಲೇಜಿನಲ್ಲಿ ಬಿಟೆಕ್ ವಿದ್ಯಾರ್ಥಿಯಾಗಿರುವ ಆದಿತ್ಯ ಪ್ರಭು ಎಂಬಾತ ಸೋಮವಾರ ಮಧ್ಯಾಹ್ನ 1.20 ರ ಸುಮಾರಿಗೆ ಎರಡನೇ ಸೆಮಿಸ್ಟರ್ ಪರೀಕ್ಷೆಯ ವೇಳೆ ಫೋನ್ ಬಳಸಿ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಇನ್ವಿಜಿಲೇಟರ್ ಆತನನ್ನು ಪರೀಕ್ಷಾ ನಿಯಂತ್ರಕರಿಗೆ ಹಸ್ತಾಂತರಿಸಿದ್ದಾರೆ. ವಿದ್ಯಾರ್ಥಿಯ ಪೋಷಕರನ್ನು ಬರುವಂತೆ ಹೇಳಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Also Read  ಅತಿವೃಷ್ಟಿ- ದಿಢೀರ್ ಏರಿಕೆ ಕಂಡ ಈರುಳ್ಳಿ ಬೆಲೆ...!

 

error: Content is protected !!
Scroll to Top