‘ರೈತರ ಪರವಾಗಿ ಸರಕಾರ ಪರಿಹಾರ ನೀಡಬೇಕು’ ➤ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.18. ತೀವ್ರವಾದ ಬರಗಾಲದಿಂದಾಗಿ ಬಿತ್ತನೆ ಬೀಜಗಳು ಹಾಳಾಗಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದು, ರೈತರ ಪರವಾಗಿ ಸರಕಾರ ತಕ್ಷಣವೇ ಪರಿಹಾರ ನೀಡಬೇಕು ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಎಪಿಎಂಸಿ ಕಾಯ್ದೆಯಡಿ ರೈತ ತನ್ನ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದಿತ್ತು. ಆದರೆ, ಹಿಂದಿನ ಎಪಿಎಂಸಿ ಕಾಯ್ದೆಯನ್ನು ಕಾಂಗ್ರೆಸ್ ಸರಕಾರ ತಿದ್ದುಪಡಿ ಮಾಡಿದ್ದು, ರೈತ ವಿರೋಧಿ ರಾಜ್ಯ ಸರಕಾರವನ್ನು ವಿರೋಧಿಸುತ್ತಿದ್ದೇವೆ ಎಂದರು.

Also Read  ಚುನಾವಣೆ ಗೆಲುವಿಗೆ ಸಂಬಂಧಿಸಿದಂತೆ ಪಣ ಕಟ್ಟಿಕೊಂಡ ರೈತರು.!   ➤ತಲಾ ಒಂದು ಎಕರೆ ಜಮೀನನ್ನು ಜಿದ್ದಿಗೆ!

 

error: Content is protected !!
Scroll to Top